×
Ad

ನೀತಿ ಸಂಹಿತೆ ಉಲ್ಲಂಘನೆ: ಸುನೀಲ್ ಕುಮಾರ್ ವಿರುದ್ಧ ಪ್ರಕರಣ

Update: 2018-04-29 22:38 IST

ಕಾರ್ಕಳ, ಎ.29: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾರ್ಕಳ ಶಾಸಕ, ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಎ.23ರಂದು ಬಿಜೆಪಿ ಪಕ್ಷದ ವತಿಯಿಂದ ಕಾರ್ಕಳದಲ್ಲಿ ನಡೆದ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದವರಿಗೆ ಕಾರ್ಕಳ ತಾಲೂಕು ಕಛೇರಿ ಬಳಿಯ ಶ್ರೀರಾಮ ಭಜನಾ ಮಂದಿರ ಮತ್ತು ಕಾರ್ಕಳದ ಶ್ರೀ ವೇಣುಗೋಪಾಲಕೃಷ್ಣ ದೇವಾಸ್ಥಾನ ದಲ್ಲಿ ಭೋಜನ ವ್ಯವಸ್ಥೆ ಮಾಡುವ ಮೂಲಕ ಕಾರ್ಯಕ್ರಮದ ಆಯೋಜಕ ಸುನೀಲ್ ಕುಮಾರ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ದೂರಲಾಗಿದೆ.

ಅಲ್ಲದೇ ಈ ಎರಡು ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆ ನಡೆಸಲು ಮಂದಿರ ಆಡಳಿತ ಮುಕ್ತೇಸರರು ಅನುವು ಮಾಡಿಕೊಟ್ಟಿರುವುದಾಗಿ ಕ್ಷಿಪ್ರ ಸಂಚಾರಿ ದಳದ ಅಧಿಕಾರಿಗಳಾದ ಕೆ.ದೇವದಾಸ ಹೆಗ್ಡೆ ಹಾಗೂ ನವೀನ್ ಕುಮಾರ್ ನೀಡಿ ದೂರಿನಂತೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News