×
Ad

ವಿವಾದಾಸ್ಪದ ಹೇಳಿಕೆ: ತ್ರಿಪುರ ಸಿಎಂಗೆ ಮೋದಿ ಬುಲಾವ್

Update: 2018-04-29 23:54 IST

 ಗುವಾಹಟಿ, ಎ.29: ತಕ್ಷಣ ದಿಲ್ಲಿಗೆ ಬಂದು ತಮ್ಮನ್ನು ಭೇಟಿಯಾಗಬೇಕು ಎಂದು ವಿವಾದಾಸ್ಪದ ಹೇಳಿಕೆ ನೀಡಿರುವ ತ್ರಿಪುರಾದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ಅವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ತಿಂಗಳು ತ್ರಿಪುರಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ದೇವ್ ಹಲವು ವಿವಾದಾಸ್ಪದ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ , ಮೇ 2ರಂದು ದಿಲ್ಲಿಗೆ ಬಂದು ಪಕ್ಷದ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವಂತೆ ಸೂಚಿಸಲಾಗಿದೆ. ದೇವ್ ನೀಡಿರುವ ಹೇಳಿಕೆಯಿಂದ ಹಲವು ಹಿರಿಯ ನಾಯಕರು ಮುಜುಗುರಗೊಂಡಿದ್ದಾರೆ. ದೇವ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News