ಲಾಲು ಪ್ರಸಾದ್ ಯಾದವ್ ರನ್ನು ಭೇಟಿಯಾದ ರಾಹುಲ್ ಗಾಂಧಿ

Update: 2018-04-30 09:04 GMT

ಹೊಸದಿಲ್ಲಿ, ಅ.30: ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ ಜೆಡಿ ಮುಖ್ಯಸ್ಥ  ಲಾಲು ಪ್ರಸಾದ್ ಯಾದವ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಭೇಟಿಯಾದರು.

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿದ್ದ ಲಾಲು ಪ್ರಸಾದ್ ಯಾದವ್ ಸಕ್ಕರೆ ಕಾಯಿಲೆ, ಅತಿಯಾದ ರಕ್ತದೊತ್ತಡ ಸಮಸ್ಯೆಯಿಂದಾಗಿ ಏಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

69ರ ಹರೆಯದ ಲಾಲು ಪ್ರಸಾದ್ ರನ್ನು ಭೇಟಿಯಾದ ರಾಹುಲ್ ಗಾಂಧಿ ಅವರ  ಆರೋಗ್ಯ ವಿಚಾರಿಸಿದರು. ರವಿವಾರ ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಜನಾಕ್ರೋಶ ರ್ಯಾಲಿಯ ಲ್ಲಿ ರಾಹುಲ್ ಗಾಂಧಿ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News