ಜೂ.8 ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ
ಬೆಂಗಳೂರು, ಎ.30: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಜೂ. 8ರಿಂದ 20ರ ವರೆಗೆ ನಡೆಯಲಿದ್ದು, ಪರೀಕ್ಷಾ ಶುಲ್ಕ ಪಾವತಿಗೆ ಮೇ 15 ಕೊನೆಯ ದಿನವಾಗಿದೆ.
ಪೂರಕ ಪರೀಕ್ಷೆ ಶುಲ್ಕ ವಿವರ(ಎಸ್ಸಿ-ಎಸ್ಟಿ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಒಂದು ವಿಷಯಕ್ಕೆ 140 ರೂ., ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳು 400 ರೂ. ಶುಲ್ಕ ಪಾವತಿ ಮಾಡಬೇಕಿದೆ.
ಫಲಿತಾಂಶ ತಿರಸ್ಕರಣಾ ಶುಲ್ಕ: ಪ್ರಥಮ ಬಾರಿಗೆ ಒಂದು ವಿಷಯಕ್ಕೆ 175 ರೂ., ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ 350 ರೂ.,
ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ: ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನವಾಗಿದ್ದು, ಪ್ರತಿ ವಿಷಯಕ್ಕೆ 530 ಶುಲ್ಕ ಪಾವತಿ ಮಾಡಬೇಕಿದೆ.
ಮರು ಮೌಲ್ಯಮಾಪನ: ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು, ಪ್ರತಿ ವಿಷಯಕ್ಕೆ 1,670 ರೂ., ಶುಲ್ಕ ಪಾವತಿ ಮಾಡಬೇಕು. ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರು ಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.
ಅದೇ ರೀತಿ, ಮರು ಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆಯ www.pue.kar.nic.in ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.