×
Ad

ಮೇ 17ಕ್ಕೆ ಸಿಎಂ ಆಗಿ ಪ್ರಮಾಣ ವಚನ: ಯಡಿಯೂರಪ್ಪ ವಿಶ್ವಾಸ

Update: 2018-04-30 21:10 IST

ಬೆಂಗಳೂರು, ಎ. 30: ಮೇ 17 ಅಥವಾ 18ರಂದು ನಾನು ರಾಜ್ಯದ ಮಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಇಲ್ಲಿನ ಹೆಬ್ಬಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರವಾಗಿ ರೋಡ್ ಶೋ ನಡೆಸಿದ ಅವರು, ಅಮಿತ್ ಶಾ ಮತ್ತು ಕುಮಾರಸ್ವಾಮಿ ಭೇಟಿ ಮಾಡಿದ್ದಾರೆಂಬ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಬಿಜೆಪಿ ಅಲೆ ಇದ್ದು ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಮೇ 17 ಅಥವಾ 18 ರಂದು ನಾನು ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ. ಅಲ್ಲದೆ, ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಬಿಜೆಪಿ ಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ನಾರಾಯಣಸ್ವಾಮಿ ಸುಶಿಕ್ಷಿತ ಹಾಗೂ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಇವರನ್ನ ಮತ್ತೊಮ್ಮೆ ಗೆಲ್ಲಿಸಿ ಜನಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡಿದ ಅವರು, ಈ ಬಾರಿ 25 ಸಾವಿರ ಮತಗಳ ಅಂತರದಿಂದ ಅವರು ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News