ಪುಲ್ವಾಮ: ಇಬ್ಬರು ಉಗ್ರರ ಹತ್ಯೆ

Update: 2018-04-30 16:40 GMT

ಶ್ರೀನಗರ, ಎ.30: ಕಾಶ್ಮೀರದ ಪುಲ್ವಾಮ ಜಿಲ್ಲೆಯ ದ್ರಾಬ್‌ಗಮ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಬಳಿಕ ಸ್ಥಳದಲ್ಲಿ ನಡೆದ ಗಲಭೆಯಲ್ಲಿ ಓರ್ವ ನಾಗರಿಕ ಕೂಡಾ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯ ಬಳಿಕ ಭದ್ರತಾ ಪಡೆಗಳ ಮೇಲೆ ಕೆಲವು ಯುವಕರು ಕಲ್ಲುತೂರಾಟಕ್ಕೆ ತೊಡಗಿದಾಗ ಕಲ್ಲೆಸೆತದಿಂದ ಗಂಭೀರ ಗಾಯಗೊಂಡ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇತರ 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News