×
Ad

ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ಎಂ.ಜಿ.ವಿಜಯ್ ಅಧಿಕಾರ ಸ್ವೀಕಾರ

Update: 2018-04-30 22:24 IST

ಉಡುಪಿ, ಎ.30: ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಎಂ.ಜಿ.ವಿಜಯ್ ಅಧಿಕಾರ ವಹಿಸಿ ಕೊಂಡಿದ್ದಾರೆ.

1985ರಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಸೇರಿ, ಕಾರ್ಕಳದ ಭುವನೇಂದ್ರ ಕಾಲೇಜು, ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿ ನಲ್ಲಿ ಸೇವೆ ಸಲ್ಲಿಸಿ 2001ರಲ್ಲಿ ಉಡುಪಿಯ ಎಂಜಿಎಂ ಕಾಲೇಜಿಗೆ ವರ್ಗಾವಣೆಗೊಂಡಿದ್ದ ಡಾ.ವಿಜಯ್, ಕಳೆದ 4 ವರ್ಷಗಳಿಂದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. 1995ರಲ್ಲಿ ಎಂ.ಫಿಲ್ ಪದವಿ, 2005ರಲ್ಲಿ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡನೆ ಮಾಡಿದ್ದಾರೆ. ಅನೇಕ ಕಾಲೇಜುಗಳಲ್ಲಿ ಭೌತಶಾಸ್ತ್ರದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ. ಮಂಗಳೂರು ವಿವಿಯ ಭೌತಶಾಸ್ತ್ರ ಪುಸ್ತಕಗಳಿಗೆ ಸಹ ಲೇಖಕರಾಗಿದ್ದಾರೆ. ಮಂಗಳೂರು ವಿವಿಯ ಭೌತಶಾಸ್ತ್ರ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ, ಅಧ್ಯಯನ ಸಮಿತಿ ದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News