ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಬೇಸರ: ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ
Update: 2018-04-30 23:02 IST
ಸಾಗರ,ಎ.30: ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಕಡಿಮೆ ಅಂಕ ಗಳಿಸಿದ್ದೇನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ರೋಹಿತ್ (17) ತೀರ್ಥಹಳ್ಳಿಯ ಅಜ್ಜಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ರೋಹಿತ್ ನೆಹರು ನಗರದ ನಿವಾಸಿಯಾಗಿದ್ದು, ಶಿಕ್ಷಕ ಭಾಸ್ಕರ್ ಹಾಗೂ ಶಿಕ್ಷಕಿ ಭವಾನಿ ಅವರ ಪುತ್ರನಾಗಿದ್ದಾನೆ .
ರೋಹಿತ್ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ಪಾಸಾಗಿದ್ದಾನೆ. ಆದರೆ ತಾನು ನಿರೀಕ್ಷಿಸಿದ ಅಂಕ ಬಾರದೇ ಇರುವುದರಿಂದ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಆಗುಂಬೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.