ಮೇ 3 ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮನ
ಬೆಂಗಳೂರು, ಮೇ 1: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೇ 3 ಮತ್ತು 4 ರಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು, ಬೀದರ್, ಕಲಬುರಗಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.
ಮೇ 3ರ ಬೆಳಗ್ಗೆ 11:30ಕ್ಕೆ ಹೊಸದಿಲ್ಲಿಯಿಂದ ಬೀದರ್‌ಗೆ ಆಗಮಿಸಲಿರುವ ರಾಹುಲ್ ಗಾಂಧಿ, ಔರಾದ್, ಬಾಲ್ಕಿ, ಹುಮ್ನಾಬಾದ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದು ರಾತ್ರಿ ಬೀದರ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮೇ 4ರಂದು ಕಲಬುರ್ಗಿ, ಗದಗ ಜಿಲ್ಲೆಯ ಗಜೇಂದ್ರಘಡ, ರೋಣ, ಗದಗ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಲ್ಲದೆ, ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಹೊಸದಿಲ್ಲಿಗೆ ಹಿಂದಿರುಗಲಿದ್ದಾರೆ ಎಂದು ಕೆಪಿಸಿಸಿ ತಿಳಿಸಿದೆ.