×
Ad

ಹಾಸನ: ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ; ಸಿಐಟಿಯು ನೇತೃತ್ವದಲ್ಲಿ ಮೆರವಣಿಗೆ

Update: 2018-05-01 22:48 IST

ಹಾಸನ,ಮೇ.01: ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಅಂಗವಾಗಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಮೆರವಣಿಗೆ ಎನ್.ಆರ್. ವೃತ್ತ ಹಾಗೂ ಬಿ.ಎಂ. ರಸ್ತೆ ಮೂಲಕ ಸರಕಾರಿ ಹಳೆ ಆಸ್ಪತ್ರೆ ಎದುರು ಇರುವ ಸ್ವಾಭಿಮಾನಿ ಭವನದವರೆಗೂ ಸಾಗಿತು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘ, ಹಮಾಲಿ ಕಾರ್ಮಿಕರ ಸಂಘಗಳು, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಬಿಎಸ್‍ಎನ್‍ಎಲ್ ಗುತ್ತಿಗೆ ಕಾರ್ಮಿಕರ ಸಂಘ, ಹಾಸನ ಜಿಲ್ಲಾ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಕಾರ್ಮಿಕರ ಸಂಘ, ಕಾಫಿ ಕ್ಯೂರಿಂಗ್ ಕಾರ್ಮಿಕರ ಸಂಘ, ಕಟ್ಟಡ ಕಾರ್ಮಿಕರ ಸಂಘಟನೆಗಳು, ಬ್ಯಾಂಕ್ ನೌಕರರ ಸಂಘಟನೆಗಳು, ವಿಮಾ ನೌಕರರ ಸಂಘಟನೆಗಳು, ಬಿಎಸ್‍ಎನ್‍ಎಲ್ ನೌಕರರ ಸಂಘಟನೆಗಳು, ಅಂಚೆ ನೌಕರರ ಸಂಘಟನೆಗಳು, ಹಾಗೂ ದಲಿತ ಮತ್ತು ಜನಪರ ಸಂಘಟನೆಗಳು ಸೇರಿದಂತೆ ಇತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜ್ಞಾನ-ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಗುರುರಾಜು, ಎಐಟಿಯು ಮುಖಂಡ ಮಂಜುನಾಥ್, ಪ್ರಸಾದ್, ಸಿಐಟಿಯು ಉಪಾಧ್ಯಕ್ಷೆ ಪುಷ್ಪ, ವಸಂತಕುಮಾರ್, ಸಿಐಟಿಯು ಮುಖಂಡ ಅರವಿಂದ್, ಪೃಥ್ವಿ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News