ಮೇ ಅಂತ್ಯಕ್ಕೆ ಸಿಇಟಿ ಫಲಿತಾಂಶ ಪ್ರಕಟ

Update: 2018-05-02 15:34 GMT

ಬೆಂಗಳೂರು, ಮೇ 2: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಮೇ ತಿಂಗಳ ಅಂತ್ಯದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ 25 ದಿನಗಳ ನಂತರ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಇದೀಗ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸಿಇಟಿ ಪರೀಕ್ಷೆಯ ಇತರೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಎ.18 ರಿಂದ 20ರವರೆಗೂ ಸಿಇಟಿ ರಾಜ್ಯದ 430 ಕೇಂದ್ರಗಳಲ್ಲಿ ನಡೆದಿದ್ದು, ಜೀವಶಾಸ್ತ್ರ ಪರೀಕ್ಷೆಯನ್ನು 1,53,450 ವಿದ್ಯಾರ್ಥಿಗಳು ಹಾಗೂ ಗಣಿತ ಪರೀಕ್ಷೆಯನ್ನು 1,90,784 ವಿದ್ಯಾರ್ಥಿಗಳು ಬರೆದಿದ್ದರು.

ಭೌತಶಾಸ್ತ್ರ ಪರೀಕ್ಷೆಯನ್ನು 1,92,987 ವಿದ್ಯಾರ್ಥಿಗಳು ಹಾಗೂ ರಸಾಯನಶಾಸ್ತ್ರ ಪರೀಕ್ಷೆಯನ್ನು 1,92,951 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಫಲಿತಾಂಶ ಅಥವಾ ಹೆಚ್ಚಿನ ಮಾಹಿತಿಗಾಗಿ ಈ http://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News