ಬಂಟ್ವಾಳ: ಪ್ರಪಾತಕ್ಕೆ ಉರುಳಿಬಿದ್ದ ಲಾರಿ; ಚಾಲಕ ಮೃತ್ಯು
Update: 2018-05-02 22:52 IST
ಬಂಟ್ವಾಳ, ಮೇ 2: ಕಲ್ಲು ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟಿದ್ದು, ಕ್ಲೀನರ್ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ಸಮೀಪದ ಕಲ್ಪನೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ತಣ್ಣೀರುಪಂಥ ನಿವಾಸಿ ಅಶ್ರಫ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕ್ಲೀನರ್ ಕುದ್ರಡ್ಕ ನಿವಾಸಿ ಅಬ್ದುಲ್ ಕರೀಂ (40) ಗಾಯ ಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲುಗಳನ್ನು ಹೇರಿಕೊಂಡು ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ಬಂಟ್ವಾಳ ಪೊಲೀಸರು ತಿಳಿಸಿದ್ದಾರೆ.