ಹನೂರು: ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ
Update: 2018-05-02 23:36 IST
ಹನೂರು,ಮೇ.02: ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ ಪರ ಅವರ ಪತ್ನಿ ಶ್ರೀಮತಿ ನಂದಿನಿ ಟಿ.ಕೆ ರವರು ಪಟ್ಟಣದ ಆದಿ ದೇವತೆ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಪ್ರಮುಖ ಬೀದಿಗಳಲ್ಲಿ ಮತಯಾಚನೆ ಮಾಡಿದರು
ನಂತರ ಮಾತನಾಡಿದ ಅವರು ರಾಜ್ಯದಲ್ಲಿ ರೈತರ, ಬಡವರ, ಮತ್ತು ಮಹಿಳೆಯರ ಪ್ರಗತಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಾದ್ಯವಿಲ್ಲ. ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್‍ರವರಿಗೆ ತಮ್ಮ ಅಮೂಲ್ಯವಾದ ಮತ ಹಾಕಿ ಗೆಲ್ಲಿಸುವುದರ ಮುಖಾಂತರ ರಾಜ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಪಣ ತೊಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡ ನಾಗೇಂದ್ರ, ಉಮೇಶ್, ರಘು, ವೇಧಾಕುಮಾರಿ ಸೇರಿದಂತೆ ಹಲವಾರು ಮಹಿಳಾ ಸಂಘಟನೆಯ ಮುಖ್ಯಸ್ಥೆಯರು ಭಾಗವಹಿಸಿದರು