ನಿಲ್ಲಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ : ಸವಾರ ಸಾವು
Update: 2018-05-03 19:18 IST
ಶಿವಮೊಗ್ಗ, ಮೇ 3: ರಸ್ತೆ ಬದಿ ನಿಲ್ಲಿಸಿದ್ದ ಬುಲೆರೋ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜು ಸಮೀಪದ ತಿಮ್ಲಾಪುರ ಕ್ರಾಸ್ ಬಳಿ ನಡೆದಿದೆ. ಚಿಕ್ಕಕಲತ್ಗ್ರ ಗ್ರಾಮದ ನಿವಾಸಿ ಶಿವಪ್ಪ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಈ ಸಂಬಂಧ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.