ಮತದಾನ ಜಾಗೃತಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
Update: 2018-05-03 19:51 IST
ಉಡುಪಿ, ಮೇ 3: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಮೇ 12 ರಂದು ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮೇ 6ರಂದು ಬನ್ನಂಜೆ ಕಲ್ಕುಡ ದೈವಸ್ಥಾನದ ಬಳಿ ಬೆಳಗ್ಗೆ 9:30ರಿಂದ ಅಪರಾಹ್ನ 1:30ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.