ತಮಿಳುನಾಡಿಗೆ ನೀರು ಹರಿಸಿದರೆ ಮುಖ್ಯಮಂತ್ರಿಯ ರಕ್ತ ಕುಡಿಯಬೇಕಾಗುತ್ತದೆ : ಡಾ.ಜಿ.ಮಾದೇಗೌಡ ಎಚ್ಚರಿಕೆ

Update: 2018-05-03 16:55 GMT

ಮಂಡ್ಯ, ಮೇ 3: ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿಸಿದರೆ ಜನರು ಕುಡಿಯುವ ನೀರಿನ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ತ ಕುಡಿಯಬೇಕಾಗುತ್ತದೆ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಡಾ.ಜಿ.ಮಾದೇಗೌಡ ಎಚ್ಚರಿಸಿದ್ದಾರೆ.

ಗುರುವಾರ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರಿಂಕೋರ್ಟ್ ತಮಿಳುನಾಡಿಗೆ 4ಟಿ.ಎಂ.ಸಿ ನೀರು ಹರಿಸುವಂತೆ ಆದೇಶ ನೀಡಿರುವುದು ವಿಷಾದಕರ. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಜನಜಾನುವಾರು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಬಲಿಕೊಟ್ಟು ತಮಿಳುನಾಡಿಗೆ ನೀರು ಬಿಡಬಾರದು ಎಂದು ತಾಕೀತು ಮಾಡಿದರು.

ಈ ಬಗ್ಗೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯದ ಸಂಸದರು, ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಅನ್ಯಾಯವಾಗದಂತೆ ಎಚ್ಚರವಹಿಸಬೇಕು ಎಂದು ಅವರು ಒತ್ತಾಯಿಸಿದರು. 

ಮಾಜಿ ಸಂಸದೆ ರಮ್ಯಾ ಅವರ ತಾಯಿ ರಂಜಿತಾ ಮಾತನಾಡಿ, ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕೆಆರ್ ಎಸ್‍ನಿಂದ ನೀರು ಹರಿಸಬಾರದು.  ಜಲಾಶಯದಲ್ಲಿ ನೀರಿನಮಟ್ಟ ಕುಸಿದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಕ್ತ ನಿರ್ಧಾರ ಕೈಗೊಂಡು ರಾಜ್ಯದ ರೈತರ ಹಿತರಕ್ಷಣೆಗೆ ಮುಂದಾಗಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News