×
Ad

ಮತ್ತೆ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ:ಜಯಮಾಲಾ ವಿಶ್ವಾಸ

Update: 2018-05-03 22:35 IST

ಮಂಡ್ಯ, ಮೇ 3: ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಅಸ್ಥಿತ್ವಕ್ಕೆ ಬರಲಿದೆ ಎಂದು ಚಿತ್ರನಟಿ, ವಿಧಾನಪರಿಷತ್ ಸದಸ್ಯೆ ಜಯಮಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಅವರ ಪರವಾಗಿ ಕ್ಷೇತ್ರದ ಹಲ್ಲೇಗೆರೆ ಗ್ರಾಮದಲ್ಲಿ ಗುರುವಾರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯರಂತಹ ಮುಖ್ಯಮಂತ್ರಿ ಮತ್ತೊಬ್ಬರು ಬರಲು ಸಾಧ್ಯವಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013ರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಸಂಪೂರ್ಣ ಈಡೇರಿಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ಪ್ರಸಕ್ತ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ಅವರು ಹೇಳಿದರು.

ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರವನ್ನು ಕೇಳಿದಾಗ ನಿರಾಕರಿಸಿತು. ಆದರೆ, ಸಿದ್ದರಾಮಯ್ಯ ಅವರು ರೈತರ ಸಾಲಮನ್ನಾ ಮಾಡಿದರು. ಜತೆಗೆ ಅವರು ಎಷ್ಟು ಸಾಧ್ಯವೋ ಅಷ್ಟು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಜನರ ಋಣ ತೀರಿಸುವ ಸಂಕಲ್ಪವನ್ನು ಹೊಂದಿದ್ದಾರೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ಅವರ ಜನಪ್ರಿಯತೆ, ಸಾಧನೆ, ಅವರು ಜನರಿಗೆ ತಲುಪಿಸುವ ರೀತಿಯನ್ನು ವಿರೋಧ ಪಕ್ಷಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಎಂದರು.

ಅಭ್ಯರ್ಥಿ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ, ತಾಪಂ ಸದಸ್ಯ ಮಂಜೇಗೌಡ, ಮಾಜಿ ಸದಸ್ಯ ಚಿಕ್ಕಬಳ್ಳಿ ಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಾಜಿ, ಜಿಪಂ ಮಾಜಿ ಸದಸ್ಯ ಜಿ.ಸಿ.ಆನಂದ್, ಇತರ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News