×
Ad

ಕಾಸರಗೋಡು: ನೇಣು ಬಿಗಿದ ಸ್ಥಿತಿಯಲ್ಲಿ ತಂದೆ, ತಾಯಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ

Update: 2018-05-03 22:45 IST

ಕಾಸರಗೋಡು, ಮೇ 3: ತಂದೆ, ತಾಯಿ, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಅಡೂರು ಸಮೀಪದ ಮೊಟ್ಟಕುಂಜದಲ್ಲಿ ಗುರುವಾರ ರಾತ್ರಿ ಬೆಳಕಿಗೆ ಬಂದಿದೆ.

ಮೃತರನ್ನು  ರಾಧಾಕೃಷ್ಣ ( 44) , ಪತ್ನಿ ಪ್ರಸೀದಾ (35), ಮಕ್ಕಳಾದ  ಕಾಶಿನಾಥ್ ( 5) ಮತ್ತು ಶಬರಿನಾಥ್ ( 3) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಆದೂರು ಪೊಲೀಸರು  ಮತ್ತು ಹಿರಿಯ ಪೊಲೀಸ್  ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News