ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ :ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Update: 2018-05-03 18:11 GMT

ಬೆಂಗಳೂರು, ಮೇ 3: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಆರೋಪಿ ಕೇಶವ್ ಎಂಬಾತನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ನಗರದ 55ನೆ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

2014ರ ಎ.3 ರಂದು 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕೇಶವ್ ಯಾನೆ ಕಾಕಾ ಎಂಬಾತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ಥೆಯ ತಾಯಿ ನೀಡಿದ ದೂರಿನನ್ವಯ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕಲಂ 376 ಐಪಿಸಿ ಮತ್ತು ಪೋಕ್ಸೊೀ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಠಾಣೆಯ ಎಸ್ಸೈ ಮಂಜುನಾಥ್ ಅವರು ಆರೋಪಿ ಕೇಶವ್‌ನನ್ನು ವಶಕ್ಕೆ ಪಡೆದು ತನಿಖೆಯನ್ನು ಪೂರ್ಣಗೊಳಿಸಿ ನಗರದ 55ನೆ ಸಿಸಿಎಚ್ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಸರಕಾರಿ ಅಭಿಯೋಜಕರಾಗಿ ರೇಮಣಿ ಅಭಿಯೋಗ ಮಂಡಿಸಿದ್ದು, ವಾದವನ್ನು ಆಲಿಸಿದ ನ್ಯಾಯಾಲಯ ಕೇಶವ್‌ಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News