4 ರಾಜ್ಯಗಳಿಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯ ಎಚ್ಚರಿಕೆ

Update: 2018-05-04 14:16 GMT

ಹೊಸದಿಲ್ಲಿ, ಮೇ 4: ರಾಜಸ್ಥಾನ ಹಾಗು ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಧೂಳು ಬಿರುಗಾಳಿಯಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆಯ ನಡುವೆಯೇ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಹಾಗು ಉತ್ತರ ಪ್ರದೇಶಗಳಿಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಕಳೆದ ಎರಡು ದಿನಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಿಂದ 124 ಮಂದಿ ಮೃತಪಟ್ಟಿದ್ದು, 300 ಮಂದಿ ಗಾಯಗೊಂಡಿದ್ದರು.  ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಅಂದರೆ 73 ಮಂದಿ ಮೃತಪಟ್ಟಿದ್ದಾರೆ. 91 ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಹಾಗು ಉತ್ತರಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಎಚ್ಚರಿಕೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News