ಉಡುಪಿ: ಚುನಾವಣಾ ಕರ್ತವ್ಯದ ಸಿಬ್ಬಂದಿಗೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರ
ಉಡುಪಿ, ಮೇ 4: ಚುನಾವಣಾ ಕರ್ತವ್ಯದ ಮೇಲಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮೇ 6ರಂದು ಬೆಳಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ಈ ತಿಳಿಸಿರುವ ಚುನಾವಣಾ ತರಬೇತಿ ಕೇಂದ್ರದಲ್ಲಿ ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರವನ್ನು ತೆರೆಯಲಾಗಿದೆ.
118.ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ, 119. ಕುಂದಾಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಂಡಾರ್‌ಕಾರ್ಸ್ ಕಾಲೇಜು ಕುಂದಾಪುರ, 120. ಉಡುಪಿ ಕ್ಷೇತ್ರಕ್ಕೆ ಸಂಬಂಧಿ ಸಿದಂತೆ ಸೈಂಟ್ ಸಿಸಿಲಿಸ್ ಶಿಕ್ಷಣ ಸಂಸ್ಥೆ ಬ್ರಹ್ಮಗಿರಿ ಉಡುಪಿ, 121. ಕಾಪು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಲಾಸ್ ಇಂಟರ್‌ನೇಷನಲ್ ಶಿಕ್ಷಣ ಕೇಂದ್ರ ನಿಟ್ಟೂರು ಉಡುಪಿ, 122.ಕಾರ್ಕಳ ಕ್ಷೇತ್ರಕ್ಕೆ ಸಂಬಂಧಿಸಿ ಕ್ರೈಸ್ಟ್ ಕಿಂಗ್ ಶಾಲೆ ಕಾರ್ಕಳ.
ಅಂಚೆ ಮತಪತ್ರ ಮೂಲಕ ಮತ ಚಲಾಯಿಸಲು ತಮ್ಮ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದಲ್ಲಿ (ಅಂದರೆ ಮತ ಇರುವ ಕ್ಷೇತ್ರದಲ್ಲಿ) ಚುನಾವಣಾ ಗುರುತಿನ ಚೀಟಿ ಹಾಗೂ ಚುನಾವಣಾ ಕರ್ತವ್ಯ ನೇಮಕಾತಿ ಆದೇಶದೊಂದಿಗೆ ನಿಗದಿತ ದಿನದಂದು ಕೇಂದ್ರದಲ್ಲಿ ಹಾಜರಾಗಲು ಸೂಚಿಸಲಾಗಿದೆ.
ಅಂಚೆ ಮತಪತ್ರ ಸೌಲಭ್ಯ ಕೇಂದ್ರದಲ್ಲಿ ಚುನಾವಣಾ ಕರ್ತವ್ಯದ ಮೇಲಿರುವ ಸಿಬ್ಬಂದಿಗಳು ತಮ್ಮ ಮತವನ್ನು ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.