ಮೇ 5ರಂದು ಅಂ.ರಾ. ಕಾರ್ಮಿಕರ ದಿನಾಚರಣೆ
ಉಡುಪಿ, ಮೇ 4: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಉಡುಪಿ, ಜಿಲ್ಲಾ ಕಾರ್ಮಿಕ ಇಲಾಖೆ ಉಡುಪಿ ಮತ್ತು ಬಾಳಿಗಾ ಫಿಶ್‌ನೆಟ್ ನಿಟ್ಟೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ-2018ರ ಅಂಗವಾಗಿ ಕಾನೂನು ಅರಿವು ಕಾರ್ಯ ಕ್ರಮವನ್ನು ಮೇ 5ರಂದು ಬೆಳಗ್ಗೆ 9 ಗಂಟೆಗೆ ನಿಟ್ಟೂರಿನ ಬಾಳಿಗಾ ಫಿಶ್‌ನೆಟ್ ಇಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಉದ್ಘಾಟಿ ಸುವರು. ಅಧ್ಯಕ್ಷತೆಯನ್ನು ಬಾಳಿಗಾ ಫಿಶ್‌ನೆಟ್‌ನ ಆಡಳಿತ ನಿರ್ದೇಶಕ ಕೆ. ಮುರಳೀಧರ ಬಾಳಿಗಾ ವಹಿಸುವರು.
ಮುಖ್ಯ ಅತಿಥಿಗಳಾಗಿ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರಾಮ್‌ಪ್ರಶಾಂತ್ ಎಂ.ಎನ್, ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ, ಬಾಳಿಗಾ ಫಿಶ್‌ನೆಟ್‌ನ ಜಂಟಿ ಆಡಳಿತ ನಿರ್ದೇಶಕ ಕೆ.ಶಶಿಧರ ಭಾಗವಹಿಸಲಿದ್ದಾರೆ.
ಕಾರ್ಮಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಎಸ್.ಎಸ್. ಮತ್ತು ಅಸಂಘಟಿತ ಕಾರ್ಮಿಕರಿಗೆ ಸಿಗುವ ಸವಲತ್ತುಗಳ ಕುರಿತು ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.