×
Ad

ಪಕ್ಷದ ಫಲಕಗಳಿಗೆ ಬಿಬಿಎಂಪಿ ಅನುಮತಿ ನಿರಾಕರಣೆ: ಬಿಜೆಪಿಯಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

Update: 2018-05-04 21:52 IST

ಬೆಂಗಳೂರು, ಮೇ 4: ಬಿಜೆಪಿ ಫಲಕಗಳಿಗೆ ಬಿಬಿಎಂಪಿ ಅನುಮತಿ ನಿರಾಕರಿಸುತ್ತಿರುವುದನ್ನು ಪ್ರಶ್ನಿಸಿ ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಬಿಬಿಎಂಪಿ ಆಯುಕ್ತರು ಬಿಜೆಪಿಯ ಪ್ರಚಾರದ ಹಕ್ಕನ್ನು ಮೊಟಕುಗೊಳಿಸುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಬಿಬಿಎಂಪಿ ಪರ ವಾದಿಸಿದ ಅಡ್ವೋಕೇಟ್ ಜನರಲ್ ಮಧುಸೂದನ್ ಆರ್. ನಾಯ್ಕೋ ಅವರು, ಕೆಲ ಸ್ಥಳಗಳಲ್ಲಿ ಮಾತ್ರ ಜಾಹೀರಾತುಗಳನ್ನು ಹಾಕಲು ಬಿಬಿಎಂಪಿ ಅನುಮತಿ ನೀಡಿದೆಯೇ ವಿನಹ ಎಲ್ಲ ಕಡೆಗೂ ಜಾಹೀರಾತುಗಳನ್ನು ಹಾಕಲು ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News