ಬಿಬಿಎಂಪಿಯಲ್ಲಿ ಕಸ ಗುಡಿಸುವ ಯಂತ್ರದಲ್ಲಿ ಅಕ್ರಮ: ರಾಜ್ಯ ಸರಕಾರ, ಬಿಬಿಎಂಪಿಗೆ ಹೈಕೋರ್ಟ್ ತುರ್ತು ನೋಟಿಸ್
Update: 2018-05-04 21:53 IST
ಬೆಂಗಳೂರು, ಮೇ 4: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಕಸ ಗುಡಿಸುವ ಯಂತ್ರದ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ, ಬಿಬಿಎಂಪಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಆರ್.ಗೋಪಾಲ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಬಿಬಿಎಂಪಿಯ ಕಸ ಗುಡಿಸುವ ಯಂತ್ರವೊಂದಕ್ಕೆ 65 ಲಕ್ಷ ರೂ. ಪಾವತಿಸುವ ಬದಲಿಗೆ 90 ಲಕ್ಷ ರೂ.ಪಾವತಿಸಿದ್ದಾರೆ. ಅಲ್ಲದೆ, 5 ಕೋಟಿ ರೂ.ಹೆಚ್ಚುವರಿ ಹಣ ನೀಡಿ ಕಸ ಗುಡಿಸುವ ಯಂತ್ರಗಳನ್ನು ಖರೀದಿಸಿದ್ದು, ಈ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.