ಪತ್ರಕರ್ತರಿಗೆ ಹಲ್ಲೆ : ಇಬ್ಬರು ಆರೆಸ್ಸೆಸ್ ಕಾರ್ಯಕರ್ತರ ಬಂಧನ

Update: 2018-05-04 16:24 GMT

ಮಲಪ್ಪುರಂ, ಮೇ 4: ಮಲಪ್ಪುರಂ ಪ್ರೆಸ್‌ಕ್ಲಬ್‌ನಲ್ಲಿ ಮಲಯಾಳಿ ದಿನಪತ್ರಿಕೆಯ ಫೋಟೋ ಜರ್ನಲಿಸ್ಟ್(ಛಾಯಾಗ್ರಾಹಕ)ನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಮಲಪ್ಪುರಂನಲ್ಲಿ ಇತ್ತೀಚೆಗೆ ಆರೆಸ್ಸೆಸ್ ಕಚೇರಿಯ ಮೇಲೆ ನಡೆದ ದಾಳಿಯನ್ನು ಖಂಡಿಸಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಆರೆಸ್ಸೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದರು. ಅಲ್ಲದೆ ಆ ರಸ್ತೆಯಲ್ಲಿ ಬಂದ ಬೈಕ್ ಸವಾರನೊಬ್ಬನನ್ನು ಅಡ್ಡಗಟ್ಟಿ ಆತನ ಬೈಕ್‌ನ ಕೀಯನ್ನು ತೆಗೆದಿಟ್ಟುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದ್ದು ಈ ಘಟನೆಯನ್ನು ಫೋಟೋ ಜರ್ನಲಿಸ್ಟ್ ವೀಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅವರ ಮೇಲೆ ಪ್ರೆಸ್‌ಕ್ಲಬ್‌ನಲ್ಲಿ ಹಲ್ಲೆ ನಡೆಸಲಾಗಿದ್ದು ಗಂಭೀರ ಗಾಯಗೊಂಡಿದ್ದರು.

ಪ್ರತಿಭಟನಾ ರ್ಯಾಲಿಯ ಸಂದರ್ಭ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ 10 ಆರೆಸ್ಸೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News