ಐಪಿಎಲ್: ಮುಂಬೈ ಇಂಡಿಯನ್ಸ್‌ಗೆ ಆರು ವಿಕೆಟ್ ಗೆಲುವು
ಇಂದೋರ್, ಮೇ 4: ಆರಂಭಿಕ ಆಟಗಾರ ಸೂರ್ಯಕುಮಾರ್ ಯಾದವ್(57), ನಾಯಕ ರೋಹಿತ್ ಶರ್ಮ(ಔಟಾಗದೆ 24) ಹಾಗೂ ಹಾರ್ದಿಕ್ ಪಾಂಡ್ಯ(ಔಟಾಗದೆ 31)ಸಂಘಟಿತ ಪ್ರದರ್ಶನದ ನೆರವಿನಿಂದ ಐಪಿಎಲ್‌ನ 34ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ.
ಗೆಲುವಿಗೆ 175 ರನ್ ಗುರಿ ಪಡೆದ ಮುಂಬೈ ತಂಡ 19ನೇ ಓವರ್‌ನಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 176 ರನ್ ಕಲೆಹಾಕಿತು.
ಯಾದವ್ 57(42 ಎಸೆತ, 6 ಬೌಂಡರಿ, 3 ಸಿಕ್ಸರ್)ಲೂವಿಸ್ ಜೊತೆಗೂಡಿ ಮೊದಲ ವಿಕೆಟ್‌ಗೆ 38 ರನ್ ಸೇರಿಸಿ ಸಾಧಾರಣ ಆರಂಭ ನೀಡಿದರು.
5ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 56 ರನ್ ಸೇರಿಸಿದ ರೋಹಿತ್ ಹಾಗೂ ಹಾರ್ದಿಕ್ ತಂಡಕ್ಕೆ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ ಗೆಲುವು ತಂದರು.
ಇದಕ್ಕೆ ಮೊದಲು ಆರಂಭಿಕ ಆಟಗಾರ ಕ್ರಿಸ್ ಗೇಲ್ ಅರ್ಧಶತಕ(50) ಹಾಗೂ ಇನಿಂಗ್ಸ್ ಅಂತ್ಯದಲ್ಲಿ ಒಂದೇ ಓವರ್‌ನಲ್ಲಿ 21 ರನ್ ಗಳಿಸಿದ ಮಾರ್ಕಸ್ ಸ್ಟೋನಿಸ್ ಸಾಹಸದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ6 ವಿಕೆಟ್‌ಗಳ ನಷ್ಟಕ್ಕೆ 174 ರನ್ ಗಳಿಸಿತು.
ಪಂಜಾಬ್‌ಗೆ ಕೆ.ಎಲ್. ರಾಹುಲ್(24) ಹಾಗೂ ಕ್ರಿಸ್ ಗೇಲ್(50, 40 ಎಸೆತ, 6 ಬೌಂಡರಿ, 2 ಸಿಕ್ಸರ್) 6.4 ಓವರ್‌ಗಳಲ್ಲಿ 54 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭವನ್ನು ನೀಡಿದರು.