ರಾಜ್ಯ ವಿಧಾನಸಭೆ ಚುನಾವಣೆ: ಮಹಿಳೆಯರಿಗಾಗಿ ವಿಶೇಷ ಮತಗಟ್ಟೆ

Update: 2018-05-05 12:32 GMT

ಬೆಂಗಳೂರು, ಮೇ 5: ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರೇ ಒಳಗೊಂಡ ಮತಗಟ್ಟೆಗಳನ್ನು ಪ್ರಾರಂಭಿಸುತ್ತಿದ್ದು, ಅವುಗಳನ್ನು ವಿಶೇಷವಾದ ಗುಲಾಬಿ ಬಣ್ಣದ ಮತಗಟ್ಟೆಗಳೆಂದು ಕರೆಯಲಾಗುತ್ತದೆ.

ಗುಲಾಬಿ ಬಣ್ಣದ ಮತಗಟ್ಟೆಗಳು ಮಹಿಳೆಯರನ್ನು ಸಬಲೀಕರಣಗೊಳಿಸಿ ಮತದಾನ ಪ್ರಕ್ರಿಯೆಯಲ್ಲಿ ಅವರನ್ನು ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಗುಲಾಬಿ ಬಣ್ಣದ ಮತಗಟ್ಟೆಗಳನ್ನು ಸಿದ್ದಪಡಿಸುವ ಕೆಲಸ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಗುಲಾಬಿ ಬಣ್ಣದ ಮತಗಟ್ಟೆಗಳ ಗೋಡೆಗಳಿಗೆ ಬಣ್ಣ ಬಳಿಯುವ ಕೆಲಸ ಶುರುವಾಗಿದೆ. ಈ ರೀತಿಯ ಮತಗಟ್ಟೆಗಳನ್ನು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 450 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದರಂತೆ ಮಹಿಳಾ ಮತದಾರರೇ ಹೆಚ್ಚಾಗಿರುವ ಮತಗಟ್ಟೆಗಳಲ್ಲಿ ಗುಲಾಬಿ(ಪಿಂಕ್) ಬಣ್ಣದ ಮತಗಟ್ಟೆಗಳನ್ನು ತೆರೆಯಲಾಗುತ್ತದೆ.

ಮತಗಟ್ಟೆ ಅಧಿಕಾರಿ, ಚುನಾವಣಾ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಹಿಳೆಯರೇ ಇರುತ್ತಾರೆ. ಸಿಬ್ಬಂದಿ ಕೂಡ ಪಿಂಕ್ ಬಣ್ಣದ ವಸ್ತ್ರಗಳನ್ನು ಧರಿಸಿರುತ್ತಾರೆ. ಮತಗಟ್ಟೆಗಳ ಗೋಡೆಗಳು ಹಾಗೂ ಫಲಕಗಳು ಕೂಡ ಗುಲಾಬಿ ಬಣ್ಣದಲ್ಲೇ ಇರುತ್ತವೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News