ಬೆಂಗಳೂರು: ಆಮ್‌ಆದ್ಮಿ ಶಾಂತಿನಗರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ

Update: 2018-05-05 16:06 GMT

ಬೆಂಗಳೂರು, ಮೇ 5: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಶಾಂತಿನಗರ ಕ್ಷೇತ್ರದ ಅಭ್ಯರ್ಥಿ ರೇಣುಕಾ ವಿಶ್ವನಾಥನ್ ತಮ್ಮ ಕ್ಷೇತ್ರದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಕ್ಷೇತ್ರದ 30 ಸಾವಿರ ಮನೆಗಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿದ್ದಾರೆ. ಜತೆಗೆ ದೂರವಾಣಿ ಮುಖಾಂತರ 70 ಸಾವಿರ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಂತೆಯೆ ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರದ ಮತದಾರರು, ನಿವಾಸಿ ಕ್ಷೇಮಾಭಿವೃದ್ಧಿ ಸಂಘ, ಆಸಕ್ತ ಗುಂಪುಗಳ ಸಂಪರ್ಕ ಬೆಳೆಸಿ ಸಮಸ್ಯೆ ಹಾಗೂ ಆಶೋತ್ತರಗಳನ್ನು ತಿಳಿದುಕೊಂಡಿದ್ದೇವೆ. ಇದರ ಆಧಾರದ ಮೇಲೆ ಕ್ಷೇತ್ರದ 7 ವಾರ್ಡ್‌ವಾರು ಪ್ರತ್ಯೇಕ ಪ್ರಣಾಳಿಕೆ ಮಾಡಿದ್ದೇವೆ ಎಂದು ಹೇಳಿದರು.

ಶಾಂತಿನಗರ ವ್ಯಾಪ್ತಿಯ ಏಳು ವಾರ್ಡ್‌ಗಳ ಪೈಕಿ ಒಂದೊಂದು ವಾರ್ಡ್‌ನಲ್ಲೂ ಭಿನ್ನ ಸಮಸ್ಯೆಗಳಿವೆ. ಹಾಗಾಗಿ ಇಡೀ ಕ್ಷೇತ್ರಕ್ಕೆ ಒಂದು ಪ್ರಣಾಳಿಕೆ ಮತ್ತು ಪ್ರತಿ ವಾರ್ಡ್‌ಗೂ ಪ್ರತ್ಯೇಕ ಆಶ್ವಾಸನೆಗಳ ಪಟ್ಟಿ ತಯಾರಿಸಲಾಗಿದೆ. ಕಸ ನಿರ್ವಹಣೆ. ರಾಜಕಾಲುವೆ, ನಾಲೆಗಳು, ಸಂಚಾರ ದಟ್ಟಣೆ ಸಮಸ್ಯೆಗಳಿಗೆ ಆದ್ಯತೆ ನೀಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಶಿವಕುಮಾರ್ ಚೆಂಗಲರಾಯ, ಮುಖಂಡರಾದ ಸುನೀಲ್‌ಕುಮಾ್, ವಿಜಯಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News