ಭಾಸ್ಕರ್ ಶೆಟ್ಟಿ ಕೊಲೆ: ನಿರಂಜನ್ ಭಟ್‌ಗೆ ಜಾಮೀನು ತಿರಸ್ಕೃತ
Update: 2018-05-05 23:04 IST
ಉಡುಪಿ, ಮೇ 5: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ನಂದಳಿಕೆಯ ನಿರಂಜನ್ ಭಟ್‌ಗೆ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇತ್ತೀಚೆಗೆ ತಿರಸ್ಕರಿಸಿದೆ.
ಪ್ರಕರಣದ ವಿಚಾರಣೆಯ ವಿಳಂಬವನ್ನು ಮುಂದಿಟ್ಟುಕೊಂಡು ಆರೋಪಿ ಪರ ವಕೀಲ ವಿಕ್ರಂ ಹೆಗ್ಡೆ ಮಾ.12ರಂದು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಇದಕ್ಕೆ ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿಬಾಯಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ ಎಂದು ಮೂಲ ಗಳು ತಿಳಿಸಿವೆ.
ನಿರಂಜನ್ ಭಟ್ ಈ ಹಿಂದೆ ಹೈಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಹೈಕೋರ್ಟ್ 2017ರ ಜು.26ರಂದು ತಿರಸ್ಕರಿಸಿ ಆದೇಶ ನೀಡಿತ್ತು.