ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಬಿಎಐ ನಗದು ಪುರಸ್ಕಾರ

Update: 2018-05-05 18:49 GMT

ಹೊಸದಿಲ್ಲಿ, ಮೇ 5: ಕಳೆದ ತಿಂಗಳು ಆಸ್ಟ್ರೇಲಿಯದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಭಾರತದ ಬ್ಯಾಡ್ಮಿಂಟನ್ ಸಂಸ್ಥೆ(ಬಿಎಐ) ಶನಿವಾರ ನಗದು ಬಹುಮಾನ ನೀಡಿ ಗೌರವಿಸಿದೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್‌ಗೆ 20 ಲಕ್ಷ ರೂ., ಫೈನಲ್‌ನಲ್ಲಿ ಸೋತಿರುವ ಪಿ.ವಿ.ಸಿಂಧುಗೆ 10 ಲಕ್ಷ ರೂ. ಬಹುಮಾನ ನೀಡಲಾಗಿದೆ.

ಕಂಚಿನ ಪದಕ ಜಯಿಸಿರುವ ಮಹಿಳಾ ಡಬಲ್ಸ್ ಆಟಗಾರ್ತಿಯರಾದ ಅಶ್ವಿನಿ ಪೊನ್ನಪ್ಪ ಹಾಗೂ ಎನ್.ಸಿಕ್ಕಿ ರೆಡ್ಡಿಗೆ ತಲಾ 3.75 ಲಕ್ಷ ರೂ. ಹಸ್ತಾಂತರಿಸಲಾಗಿದೆ.

ಪುರುಷರ ಡಬಲ್ಸ್ ತಂಡದ ಆಟಗಾರರಾದ ಸಾತ್ವಿಕ್‌ಸಾಯಿರಾಜ್ ರಾನಿಕ್‌ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ತಲಾ 7.5 ಲಕ್ಷ ರೂ, ಮಿಶ್ರ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿರುವ ತಂಡಕ್ಕೆ 50 ಲಕ್ಷ ರೂ. ಬಹುಮಾನ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News