ನಾಳೆ ಎಸೆಸೆಲ್ಸಿ ಫಲಿತಾಂಶ ಪ್ರಕಟ
Update: 2018-05-06 18:20 IST
ಬೆಂಗಳೂರು, ಮೇ 6: ಮಾರ್ಚ್ ಮತ್ತು ಎಪ್ರಿಲ್‌ನಲ್ಲಿ ನಡೆದ 2018ನೆ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಮೇ 7) ಮಧ್ಯಾಹ್ನ 1 ಗಂಟೆಗೆ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಮೇ 7ರ ಸೋಮವಾರ ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಎಸೆಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಅನಂತರ ಇಲಾಖೆ ನಿಗದಿಪಡಿಸಿರುವ ವೆಬ್‌ಸೈಟ್‌ಗಳಾದ http://sslc.kar.nic.in ಹಾಗೂ http://karresults.nic.in ನಲ್ಲಿ ಫಲಿತಾಂಶವನ್ನು ಪಡೆಯಬಹುದು. ಮೇ 8ರಂದು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಪ್ರಕಟನೆ ತಿಳಿಸಿದೆ.