×
Ad

ಬಿಜೆಪಿ ಪ್ರಣಾಳಿಕೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು: ಮಾತೂರ್

Update: 2018-05-06 19:59 IST

ಉಡುಪಿ, ಮೇ 6: ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಜನರ ಬೇಡಿಕೆಗೆ ಅನುಗುಣವಾಗಿ ಬಿಜೆಪಿ ಪ್ರಣಾಳಿಕೆಯನ್ನು ತಯಾರಿಸಲಾಗಿದ್ದು, ಇದರಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್ ಮಾತೂರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿ ದ್ದರು. 135ಕೋಟಿ ರೂ. ವೆಚ್ಚದಲ್ಲಿ ಭಟ್ಕಳ, ಹಂಗಾರಕಟ್ಟೆ, ಹೊನ್ನಾವರ ಸೇರಿ ದಂತೆ ಕರಾವಳಿಯ ಸಣ್ಣ ಸಣ್ಣ ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಲಾಗಿದೆ. ಅದೇ ರೀತಿ ಈ ಬಂದರುಗಳಲ್ಲಿ ರಫ್ತು ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ಕರಾವಳಿಯ ರೈತರಿಗಾಗಿ ದ.ಕ. ಜಿಲ್ಲೆಯಲ್ಲಿ ಎರಡು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ತಲಾ ಒಂದು ಮಾರುಕಟ್ಟೆಗಳನ್ನು ಸ್ಥಾಪಿಸಲಾಗುವುದು. ಬೆಳ್ತಂಗಡಿಯಲ್ಲಿ ಕೃಷಿ ವಿವಿಯನ್ನು ಆರಂಭಿಸಲಾಗುವುದು. ದ.ಕ. ಜಿಲ್ಲೆಯಲ್ಲಿ ಮೂರು ಮತ್ತು ಉಡುಪಿಯಲ್ಲಿ ಒಂದು ಗೇರುಬೀಜ ಸಂಸ್ಕರಣಾ ಘಟಕ ಮತ್ತು ಅಲ್ಲಿಂದ ಅವುಗಳನ್ನು ಗ್ರಾಹಕರು ನೇರವಾಗಿ ಖರೀದಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.

ಆದಿವಾಸಿ ಸಮುದಾಯದ ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡುವ ನಿಟ್ಟಿನಲ್ಲಿ ತರಬೇತಿ ಕೇಂದ್ರವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸ ಲಾಗುವುದು. ಮಂಗಳೂರಿನಲ್ಲಿ ಫಾರೆನ್ಸಿಕ್ ಲ್ಯಾಬ್, ಕಾಪುವಿನಲ್ಲಿ ಸಾಗರ ಅಧ್ಯಯನಕ್ಕೆ ಸಂಬಂಧಿಸಿದ ಸಂಸ್ಥೆ, ಸುರತ್ಕಲ್‌ನಲ್ಲಿ ಎನರ್ಜಿ ಮತ್ತು ಪೆಟ್ರೋಲಿ ಯಂ ಅಧ್ಯಯನಕ್ಕೆ ಸಂಬಂಧಿಸಿದ ವಿವಿಯನ್ನು ಸ್ಥಾಪಿಸಲಾಗುವುದು. ಗೋವಾ ಮಾದರಿಯಲ್ಲಿ ಕರ್ನಾಟಕ ಕರಾವಳಿ ಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿ ಮಾಡಲು ಬಿಜೆಪಿ ಪ್ರಣಾಳಿಕೆ ಯಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಣಾಳಿಕೆಯ ಕುರಿತು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿಗೆ ಕುಡಿಯುವ ನೀರು ಪೂರೈಸಲು ವಾರಾಹಿ ಯೋಜನೆಯ ಸಾಧ್ಯತೆ ಕುರಿತು ಅಧ್ಯಯನ ನಡೆಸಿ ಜಾರಿಗೊಳಿಸಲಾಗುವುದು. ಹೆಜಮಾಡಿ ಮೀನು ಗಾರಿಕಾ ಬಂದರಿನ ಎರಡನೆ ಹಂತದ ಕಾಮಗಾರಿ ಪೂರ್ಣಗೊಳಿಸಲಾಗು ವುದು. ಕಾರ್ಕಳದ ಪಾರಂಪರಿಕ ತಾಣಗಳು ಮತ್ತು ಜೈನ ಬಸದಿಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಬೈಂದೂರಿನಲ್ಲಿ ಹೊಸ ಕೆಎಸ್‌ಆರ್‌ಟಿಸಿ ಬಸ್ ಡಿಪೋ ನಿರ್ಮಾಣ ಮಾಡಲಾಗುವುದು. ಕುಂದಾಪುರಕ್ಕೆ ಪ್ರತ್ಯೇಕ ಸಾರಿಗೆ ಕಚೇರಿ ಸ್ಥಾಪಿಸ ಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಕುಯಿಲಾಡಿ ಸುರೇಶ್ ನಾಯಕ್, ಪ್ರಭಾಕರ ಪೂಜಾರಿ, ಪ್ರೇಮ್ ಪ್ರಸಾದ್ ಶೆಟ್ಟಿ, ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News