×
Ad

ಮಡಿಕೇರಿ: ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

Update: 2018-05-06 22:42 IST

ಮಡಿಕೇರಿ,ಮೇ.6 : ವಿಧಾನಸಭಾ ಚುನಾವಣೆಯ ಮತದಾನವು ಮೇ 12 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ನಡೆಯಲಿದ್ದು, ಜಿಲ್ಲೆಯ 538 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‍ಒ ಮತ್ತು ಎಪಿಆರ್‍ಗಳಿಗೆ (ಪ್ರಿಸೈಡಿಂಗ್ ಅಧಿಕಾರಿಗಳು) ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮವು ಭಾನುವಾರ ನಡೆಯಿತು.  

ನಗರದ ಸಂತ ಜೋಸೆಫರ ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು.   

ಪಿಆರ್‍ ಒ ಕರ್ತವ್ಯ: ಮತಗಟ್ಟೆ ಹಾಗೂ ಮತದಾನ ಸಮಯದಲ್ಲಿನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರದಲ್ಲಿ ಸಾಮಾಗ್ರಿಗಳನ್ನು ಪಡೆಯುವುದು ಮತ್ತು ನೀಡುವುದು ಮತ್ತು ಪಡೆಯುವ ಸಂಪೂರ್ಣ ಜವಾಬ್ದಾರಿ, ಅಣುಕು ಮತದಾನ, ಮತದಾನ ಪ್ರಾರಂಭ, ಮತದಾನ ಮುಕ್ತಾಯಗೊಳಿಸುವ ಜವಾಬ್ದಾರಿ. ಮತದಾನದ ದಿವಸ ಎಲ್ಲಾ ಪ್ರಕ್ರಿಯೆಗಳ ಅಂಕಿ ಅಂಶಗಳ ಬಗ್ಗೆ ಚುಣಾಧಿಕಾರಿಗಳಿಗೆ ವರದಿ ಮಾಡುವುದು ಪಿಆರ್‍ಒಗಳ ಸಂಪೂರ್ಣ ಕರ್ತವ್ಯವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.    

ವಿಧಾನಸಭೆ ಚುನಾವಣೆಯಲ್ಲಿ ಪಿ.ಆರ್.ಒ, ಎ.ಪಿ.ಆರ್.ಒ ಅಧಿಕಾರಿಗಳ ಜವಾಬ್ದಾರಿ ಮಹತ್ತರವಾಗಿದ್ದು, ಮಸ್ಟರಿಂಗ್ ದಿನ ಮತ್ತು ಮತಗಟ್ಟೆಗಳಲ್ಲಿ ನಿರ್ವಹಿಸಬೇಕಾದ ಕರ್ತವ್ಯ ಮತ್ತು ಡಿಮಸ್ಟರಿಂಗ್ ಸಂದರ್ಭದಲ್ಲಿ ಅನುಸರಿಸಬೇಕಾದ ಕಾರ್ಯಗಳ ಬಗ್ಗೆ ತರಬೇತಿದಾರ ಅಧಿಕಾರಿಗಳು ಮಾಹಿತಿ ನೀಡಿದರು.  

ವಿದ್ಯುನ್ಮಾನ ಮತಯಂತ್ರಗಳು, ಅಣುಕು ಮತದಾನ, ಅಂಚೆ ಮತಪತ್ರ, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಮತ್ತಿತರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಿದೆ. ಮತಗಟ್ಟೆ ಅಧಿಕಾರಿಗಳು ಮತಗಟ್ಟೆ ಕ್ಷೇತ್ರದ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳಬೇಕಿದೆ, ಮತದಾರರು ಚುನಾವಣಾ ಅಯೋಗ ನೀಡಿರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಚುನಾವಣಾ ಅಯೋಗದ ನಿರ್ದೇಶನದಂತೆ ಮತದಾನ ಮಾಡುವುದಕ್ಕೆ ಅವಕಾಶ ನೀಡಬೇಕಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು. 

ಮಸ್ಟರಿಂಗ್ ದಿನದಂದು ಮತಗಟ್ಟೆಯ ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ನಿಗಧಿತ ಸಮಯಕ್ಕೆ ಹಾಜರಾಗಬೇಕು. ತಮ್ಮ ತಮ್ಮ ಮತಗಟ್ಟೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರಿಚಯ ಮಾಡಿಕೊಳ್ಳುವುದು, ಹಾಜರಾತಿ ಪುಸ್ತಕದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು, ಯಾವುದೇ ಮತಗಟ್ಟೆ ಅಧಕಾರಿ ಇತರೆ ಸಿಬ್ಬಂದಿ ಗೈರು ಆದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ತಿಳಿಸುವುದು, ರಜೆ ಹೋದಲ್ಲಿ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು ಮಸ್ಟರಿಂಗ್ ಪಟ್ಟಿಯಿಂದ ದೃಡಪಡಿಸಿಕೊಳ್ಳಬೇಕಿದೆ ಎಂದು ಚುನಾವಣಾಧಿಕಾರಿಗಳು ಹೇಳಿದರು. 

ವಿದ್ಯುಮ್ಮಾನ ಮತಯಂತ್ರ, ಅಣಕು ಮತದಾನ, ಕಂಟ್ರೋಲ್ ಹಾಗೂ ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್ ಅಳವಡಿಸುವುದು. ಮತಗಟ್ಟೆಯಲ್ಲಿ ಮತದಾನದಂದು ಪೂರ್ವ ಸಿದ್ಧ್ದತೆ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು. 

ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿ: ಮತಗಟ್ಟೆ ಅಧಿಕಾರಿಗಳು ಶಾಂತಿ ಮತ್ತು ನಿಷ್ಪಕ್ಷಪಾತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಧಿಕಾರಿಯಿಂದ ಮತದಾನಕ್ಕೆ ಸಂಬಂಧಿಸಿದ ಎಲ್ಲಾ ಸಾಮಾಗ್ರಿಗಳನ್ನು ಪಡೆದು ಚುನಾವಣೆ ಕರ್ತವ್ಯ ನಿರ್ವಹಿಸಬೇಕು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನ ಚುನವಾಣೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದು. 

ರ್ಯಾಂಡಮೈಸ್ ತಂಡಕ್ಕೆ ಹಂಚಿಕೆ ಮಾಡಿರುವಂತೆ ಮತಗಟ್ಟೆ ಸಂಖ್ಯೆ ಗುರುತಿಸಿಕೊಳ್ಳುವುದು, ತಮ್ಮ ಕಾರ್ಯತಂಡ ಸದಸ್ಯರ ಒಗ್ಗೂಡಿಸುವುದು, ಸಾಮಾಗ್ರಿ ವಿತರಿಸುವ ಮಸ್ಟರಿಂಗ್ ಕೌಂಟರ್ ಗೆ ತೆರಳುವುದು, ತಂಡದ ಸದಸ್ಯರೊಂದಿಗೆ ಮಸ್ಟರಿಂಗ್ ವಿಭಾಗದಿಂದ ವಿವಿಧ ಸಾಮಾಗ್ರಿ ಪಡೆಯುವುದು. ಸಾಮಾಗ್ರಿ ಪಡೆದ ನಂತರ ಮತ್ತೊಮ್ಮೆ ಸಾಮಾಗ್ರಿ ಪರಿಶೀಲಿಸಿಕೊಳ್ಳುವುದು. ಮತಗಟ್ಟೆಗೆ ತಲುಪುವ ವಾಹನ ಗುರುತಿಸಿ ಸ್ಥಳ ಕಾಯ್ದಿರಿಸಿಕೊಳ್ಳುವುದು.

ಮಸ್ಟರಿಂಗ್ ಕೌಂಟರ್‍ನಿಂದ ಪಡೆಯಬೇಕಾದ ಸಾಮಾಗ್ರಿ ವಿವರ: ಕಂಟ್ರೊಲ್ ಯೂನಿಟ್, ಬ್ಯಾಲೆಟ್ ಯೂನಿಟ್, ವಿವಿಪ್ಯಾಟ್, ವಿಎಸ್‍ಡಿಯು ಅಡ್ರಸ್ ಟ್ಯಾಗ್,  ವಿಶೇಷ ಟ್ಯಾಗ್, ಗ್ರೀನ್ ಪೇಪರ್ ಸೀಲ್, ಸೀಲ್ ವಿಶೇಷ ಸ್ಟೀಪ್ ಸ್ಟೀಲ್ ಇರುವುದೇ ಎಂದು ಖಾತರಿ ಪಡಿಸಿಕೊಳ್ಳುವುದು. 

ಮತಗಟ್ಟೆಗಾಗಿ ಸಿದ್ಧಪಡಿಸಿದ ಸಾಮಾಗ್ರಿಗಳು: ಗುರುತು ಮಾಡಿದ ಮತದಾರರ ಪಟ್ಟಿಗಳು, ಗುರುತು ಮಾಡಿದ ವರ್ಗೀಕೃತ ಸೇವಾ ಮತದಾರರಪಟ್ಟಿ, ರಬ್ಬರ್, ಮೊಹರು, ಪಿ.ಆರ್.ಒ ದಿನಚರಿ. 

ಚುನಾವಣಾ ಸಾಮಾನ್ಯ ವೀಕ್ಷಕರಾದ ಟಿ.ಶ್ರೀಕಾಂತ್, ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಹಲವು ಮಾರ್ಗದರ್ಶನ ನೀಡಿದರು.  

ಚುನಾವಣಾಧಿಕಾರಿಗಳಾದ ರಮೇಶ್ ಪಿ.ಕೊನರೆಡ್ಡಿ, ರಾಜು, ತಹಶೀಲ್ದಾರರಾದ ಶಾರದಾಂಭ, ಗೋವಿಂದರಾಜು, ಮಾಸ್ಟರ್ ತರಬೇತಿದಾರರಾದ ವಾಲ್ಟರ್ ಡೆಮೆಲ್ಲೊ, ಷಂಶುದ್ದೀನ್ ಹಾಗೂ ತರಬೇತಿಗೆ ನಿಯೋಜಿಸಿರುವ ಅಧಿಕಾರಿಗಳು ವಿಧಾನಸಭಾ ಚುನಾವಣೆ ಸಂಬಂಧ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News