ಬೆಂಗಳೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-05-07 13:11 GMT

ಬೆಂಗಳೂರು, ಮೇ 7: ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಓರಿಸ್ಸಾ ಮೂಲದ ರಾಜ್‌ಕುಮಾರ್ ಮಂಡಲ್(34) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ಆಂಧ್ರಪ್ರದೇಶದ ಮಾಧುರಿ ಎಂಬುವರನ್ನು ರಾಜ್‌ಕುಮಾರ್ ಮಂಡಲ್ ಪ್ರೀತಿಸಿ ಮದುವೆಯಾಗಿದ್ದು, ದಂಪತಿ ನಗರದ ಹರಳೂರಿನಲ್ಲಿ ವಾಸವಾಗಿದ್ದುಕೊಂಡು ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ರಾಜ್‌ಕುಮಾರ್ ಮಂಡಲ್ ರವಿವಾರ ಮನೆಯಲ್ಲಿ ಕಬ್ಬಿಣದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಯ ನಿಮಿತ್ತ ಆಂಧ್ರಪ್ರದೇಶಕ್ಕೆ ತೆರಳಿದ್ದ ಪತ್ನಿ ಬೆಂಗಳೂರಿಗೆ ಮರಳುತ್ತಿದ್ದಾಗ ಪತಿ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಆದರೆ ಮೊಬೈಲ್ ಕರೆ ಸ್ವೀಕರಿಸಿರಲಿಲ್ಲ. ರಾತ್ರಿ 9 ಗಂಟೆಗೆ ಮನೆಗೆ ಬಂದ ಪತ್ನಿ ಬಾಗಿಲು ತೆಗೆದಾಗಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಬಂಡೇಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News