ಕಾರವಾರ: ಎಸೆಸೆಲ್ಸಿಯಲ್ಲಿ ಕಡಿಮೆ ಅಂಕ; ಬಾಲಕಿ ಆತ್ಮಹತ್ಯೆ

Update: 2018-05-07 13:47 GMT

ಕಾರವಾರ, ಮೇ 7: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಬಾಲಕಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಸೋಮವಾರ ಸಂಭವಿಸಿದೆ.

ಮಾಜಾಳಿಯ ಯೂನಿಯನ್ ಹೈಸ್ಕೂಲ್ ಬಳಿಯ ನಿವಾಸಿ ಶೇಪಾಲಿ ಉಲ್ಲಾಸ ಪಡವಲಕರ (15) ಆತ್ಯಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಆಕೆ ಕಾರವಾರ ನಗರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದಳು.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News