ಮೇ 10- ಮೇ 13ರವರೆಗೆ ನಿಷೇಧಾಜ್ಞೆ
Update: 2018-05-07 22:23 IST
ಉಡುಪಿ, ಮೇ 7: ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೇ 10ರಂದು ಸಂಜೆ 6ಗಂಟೆಯಿಂದ ಮೇ 13ರ ಸಂಜೆ 6ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರ ಅನ್ವಯ ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.