×
Ad

ಚಿಕ್ಕಮಗಳೂರು: ಆಶಾ ಕಿರಣ ಅಂಧ ಮಕ್ಕಳ ಶಾಲೆಗೆ ಶೇ.95 ಫಲಿತಾಂಶ

Update: 2018-05-08 16:48 IST

ಚಿಕ್ಕಮಗಳೂರು, ಮೇ 8: ನಗರದ ರತ್ನಗಿರಿ ಬಡಾವಣೆಯಲ್ಲಿರುವ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.95.23 ರಷ್ಟು ಫಲಿತಾಂಶ ಪಡೆದಿದೆ.

ಈ ಶಾಲೆಯ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಎಚ್.ಡಿ ಅರ್ಪಿತ್ ಎಂಬ ವಿದ್ಯಾರ್ಥಿ 545 ಅಂಕಳೊಂದಿಗೆ 87.2% ಫಲಿತಾಂಶ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾನೆಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಜೆ.ಪಿ.ಕೃಷ್ಣೇಗೌಡ ರವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News