×
Ad

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಟೀಮ್ ಇಂಡಿಯಾ ಪ್ರಕಟ; ರಹಾನೆ ನಾಯಕ

Update: 2018-05-08 18:35 IST

 ಹೊಸದಿಲ್ಲಿ, ಮೇ 8: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಟೀಮ್ ಇಂಡಿಯಾ ಪ್ರಕಟಗೊಂಡಿದ್ದು, ಅಜಿಂಕ್ಯ ರಹಾನೆ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

  ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಕೊಹ್ಲಿ ಸರ್ರೆ ಕೌಂಟಿ ತಂಡದಲ್ಲಿ ಆಡಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ಗೆ ಅವರು ಲಭ್ಯರಿಲ್ಲ. ಭಾರತ ಐರ್ಲೆಂಡ್ ಮತ್ತು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಅವರಿಗೂ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿದೆ.
   ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ಗೆ ಕರ್ನಾಟಕದ ದಾಂಡಿಗ ಕರುಣ್ ನಾಯರ್ , ಅಗ್ರ ಸರದಿಯ ದಾಂಡಿಗ ಚೇತೇಶ್ವರ ಪೂಜಾರ,ಬೌಲರ್‌ಗಳಾದ ಕುಲ್‌ದೀಪ್ ಯಾದವ್, ಇಶಾಂತ್ ಶರ್ಮಾ ತಂಡಕ್ಕೆ ಮರಳಿದ್ದಾರೆ.
ದಕ್ಷಿಣ ಆಫ್ರಿಕ ಪ್ರವಾಸ ಸರಣಿಯಲ್ಲಿ ಆಡಿದ್ದ ಜಸ್‌ಪ್ರೀತ್ ಬುಮ್ರಾ ಮತ್ತು ಭುವನೇಶ್ವರ ಕುಮಾರ್ ಅವರಿಗೂ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಶಾರ್ದುಲ್ ಠಾಕೂರ್ ಮತ್ತು ಸ್ಪಿನ್ನರ್ ಕುಲ್‌ದೀಪ್‌ಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ: ಅಜಿಂಕ್ಯ ರಹಾನೆ(ನಾಯಕ), ಚೇತೇಶ್ವರ ಪೂಜಾರ, ಶಿಖರ್ ಧವನ್, ಮುರಳಿ ವಿಜಯ್, ಲೋಕೇಶ್ ರಾಹುಲ್, ಕರುಣ್ ನಾಯರ್, ವೃದ್ಧಿಮಾನ್ ಸಹಾ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಕುಲ್‌ದೀಪ್ ಯಾದವ್, ಉಮೇಶ್ ಯಾದವ್, ಮುಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ , ಶಾರ್ದುಲ್ ಠಾಕೂರ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News