×
Ad

ತೊಕ್ಕೊಟ್ಟಿನಲ್ಲಿ ಅಮಿತ್ ಶಾ ರೋಡ್ ಶೋ

Update: 2018-05-08 19:12 IST

ತೊಕ್ಕೊಟ್ಟು, ಮೇ 8: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ರೋಡ್ ಶೋ ನಡೆಸಿ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೋಳಿಯಾರ್ ಪರ ಮತ ಯಾಚಿಸಿದರು.

ಕೊಲ್ಯ ಸೌಭಾಗ್ಯ ಸಭಾಭವನದಿಂದ ಬಿಜೆಪಿ ಪಕ್ಷದ ತೆರೆದ ಲಕ್ಸುರಿ ಬಸ್ಸಿನಲ್ಲಿ ನಿಂತು ಕೊಂಡು ರಾಷ್ಟ್ರೀಯ ಹೆದ್ದಾರಿಯ ತೊಕ್ಕೊಟ್ಟು ಓವರ್ ಬ್ರಿಡ್ಜ್‌ನ ತನಕ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಕರಾವಳಿಯ ಹುಲಿವೇಷ, ಚೆಂಡೆ, ಕಂಗೀಲು ನೃತ್ಯವು ರೋಡ್ ಶೋದೊಂದಿಗೆ ಪಾಲ್ಗೊಂಡಿದ್ದವು. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೋಳಿಯಾರ್, ಉತ್ತರ ಪ್ರದೇಶದ ಸಚಿವ ಮಹೇಂದ್ರ ಸಿಂಗ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಮುಖಂಡರಾದ ಚಂದ್ರಶೇಖರ್ ಉಚ್ಚಿಲ್, ರುಕ್ಮಯ ಪೂಜಾರಿ ಮೊದಲಾದವರು ಜೊತೆಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News