×
Ad

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ

Update: 2018-05-08 19:58 IST

ಉಡುಪಿ, ಮೇ 8: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರೀತ ಭತ್ತವನ್ನು ಗ್ರಾಪಂ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೊಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಉಡುಪಿ ಜಿಲ್ಲೆಯ ಎಲ್ಲಾ ಗ್ರಾಪಂಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಅಧಿಸೂಚಿತ ಘಟಕದಲ್ಲಿದ್ದು, ವಿಮಾ ಮೊತ್ತ ಪ್ರತಿ ಹೆಕ್ಟೆರ್‌ಗೆ 54,000ರೂ. ಹಾಗೂ ವಿಮಾ ಕಂತಿನ ದರ ಪ್ರತಿ ಹೆಕ್ಟೇರ್‌ಗೆ ರೂ.1,080(ಶೇ.2) ಆಗಿದೆ.

 ರೈತರು ಬೆಳೆ ವಿಮೆ ಯೋಜನೆಯಡಿ ನೊಂದಣಿ ಮಾಡಿಸಿಕೊಳ್ಳಲು ಜುಲೈ 31ಕೊನೆಯ ದಿನವಾಗಿದ್ದು, ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪಾಸ್ ಪುಸ್ತಕ, ಕಂದಾಯ ರಸೀದಿಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸ ಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News