×
Ad

​ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಬದ್ಧ: ರೈತ ಮೋರ್ಚಾ

Update: 2018-05-09 17:43 IST

ಉಡುಪಿ, ಮೇ 9: ಕರಾವಳಿ ಜಿಲ್ಲೆಯ ರೈತರಿಗೆ ಅಗತ್ಯ ಇರುವ ನೀರಾವರಿ ಯೋಜನೆ ಮತ್ತು ಕುಡಿಯುವ ನೀರಿಗಾಗಿ ಪಶ್ಚಿಮ ವಾಹಿನಿ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಬಿಜೆಪಿ ಬದ್ಧವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ರಾಘವೇಂದ್ರ ಉಪ್ಪೂರು ತಿಳಿಸಿದ್ದಾರೆ.

ಉಡುಪಿ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1364 ಕೋಟಿ ರೂ. ಯೋಜನೆಗೆ ಕೇವಲ 100 ಕೋಟಿ ರೂ.ಗಳನ್ನು ಕಳೆದ ಎರಡು ಬಜೆಟ್‌ನಲ್ಲಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರಕಾರ ಚಿಕ್ಕಾಸು ಕೂಡ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ವಾರಾಹಿ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು. ತೋಟಗಾರಿಕಾ ಬೆಳೆಗಳ ಸಂರಕ್ಷಣೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ರೂಪಿಸಲಾಗುವುದು. ಪಶು ಸಂಗೋಪನೆ, ಹೈನು ಗಾರಿಕೆ, ಮೂಲ ಸೌಕರ್ಯ, ಪಶು ವೈದ್ಯಕೀಯ ಸೇವೆಗೆ ಉತ್ತೇಜನ ನೀಡ ಲಾಗುವುದು ಎಂದರು.

ರಾಜ್ಯದ ರೈತರು ಬಿಜೆಪಿ ಪರವಾಗಿದ್ದು, ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಅಭ್ಯರ್ಥಿಗಳು ಹೆಚ್ಚಿನ ಅಂತರದಲ್ಲಿ ಜಯಗಳಿಸಲಿದ್ದಾರೆ. ಈ ಬಾರಿ ರಾಜ್ಯ ದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಅವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ರೈತಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಶರ್ಮ, ಕ್ಷೇತ್ರ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಸುಧಾಮ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News