×
Ad

ಮಲ್ಪೆ ಬೀಚ್‌ನಲ್ಲಿ ಮೈಮ್ ಶೋ ಪ್ರದರ್ಶನ

Update: 2018-05-09 20:03 IST

ಉಡುಪಿ, ಮೇ 9: ಮೇ 12ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ರವಿವಾರ ಮಲ್ಪೆ ಸಮುದ್ರ ಕಿನಾರೆಯಲ್ಲಿ ಮಂಗಳೂರಿನ ಮೈಮ್ ರಾಮದಾಸ್ ಮತ್ತು ಬಳಗದಿಂದ ಮೈಮ್ ಶೋವೊಂದನ್ನು ಏರ್ಪಡಿಸಲಾಗಿತ್ತು.

ಈ ಪ್ರದರ್ಶನ ನೆರೆದಿದ್ದ ಸಾರ್ವಜನಿಕರಿಗೆ ಮತದಾನದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಮತದಾರರು ಯಾವುದೇ ಆಸೆ, ಆಮಿಷ, ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ ತಮ್ಮ ಸ್ವಂತ ವಿವೇಚನೆಯನ್ನು ಬಳಸಿ ಯೋಗ್ಯ ಅ್ಯರ್ಥಿಗೆ ಮತದಾನ ಮಾಡುವಂತೆ ತಿಳಿಸಿದರು.

ಈ ಬಾರಿ ಚುನಾವಣಾ ಆಯೋಗ ಮತದಾನದ ಅವಧಿಯನ್ನು ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ವಿಸ್ತರಿಸಿದ್ದು, ಮತದಾರರು ಇದರ ಸದುಪಯೋಗ ಪಡೆುುವಂತೆ ಕಾಪಶಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News