ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: 54.86 ಕೋಟಿ ರೂ.ನಗದು ವಶ

Update: 2018-05-09 15:50 GMT

ಬೆಂಗಳೂರು, ಮೇ 9: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ಸ್‌ಗಳು, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಇದುವರೆಗೆ 54.86 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ಸ್‌ಗಳು 10,85,35,114 ಲಕ್ಷ ರೂ.ನಗದು, 939.597 ಲೀ.ಮದ್ಯ, 4,10,98,000 ರೂ.ಮೌಲ್ಯದ ಚಿನ್ನ, 2,40,000 ರೂ.ಮೌಲ್ಯದ 12.165 ಕೆಜಿ ಬೆಳ್ಳಿ ಹಾಗೂ 14,90,95,495 ರೂ.ಮೌಲ್ಯದ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಯು ಕಳೆದ 24ಗಂಟೆಯಲ್ಲಿ 24,13,36,708.45 ರೂ.ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು 51 ಪ್ರಕರಣಗಳನ್ನು ದಾಖಲಿಸಿದೆ. ಮದ್ಯದ ಪರವಾನಿಗೆಯನ್ನು ಉಲ್ಲಂಘಿಸಿದ 44 ಪ್ರಕರಣಗಳು, ಎನ್‌ಡಿಪಿಎಸ್ ಕಾಯ್ದೆಯಡಿ 3 ಪ್ರಕರಣಗಳನ್ನು ದಾಖಲಿಸಲಾಗಿದೆ. ಹಾಗೂ 1 ಸಾವಿರ ವಿವಿಧ ಮಾದರಿಯ ವಾಹನಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಸಿಆರ್‌ಪಿಸಿ ಕಾಯ್ದೆಯಡಿ 342 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆಯಲಾಗಿದೆ. 363 ಜಾಮೀನು ರಹಿತ ವಾರೆಂಟ್‌ಗಳನ್ನು ಹೊರಡಿಸಲಾಗಿದೆ. ಒಟ್ಟಾರೆ 71574 ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದ್ದು, 24122 ವ್ಯಕ್ತಿಗಳಿಂದ ಮುಚ್ಚಳಿಕೆಯನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News