ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2018-05-09 22:39 IST
ಬೈಂದೂರು, ಮೇ 9: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ 10:30ರ ಸುಮಾರಿಗೆ ನಾಯ್ಕನಕಟ್ಟೆಯ ನಂದನವನದ ಮಹಾಬಲೇಶ್ವರ ದೇವಸ್ಥಾನಕ್ಕೆ ಹೋಗುವ ಬಸ್ ನಿಲ್ದಾಣದ ಬಳಿಯ ಹೋಟೆಲ್ ಆರ್ಯದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಬೈಕ್ ಸವಾರ ಸತ್ಯನಾರಾಯಣ್ ಎಂದು ಗುರುತಿಸಲಾಗಿದೆ. ಸಹಸವಾರ ಕಾಶೀನಾಥ ಎಂಬವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪ್ಪುಂದ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಬಂದ ಓಮಿನಿ ಕಾರು ಓವರ್‌ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರರಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸತ್ಯನಾರಾಯಣ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.