ಉತ್ತರ ಪ್ರದೇಶ: ಬಿರುಗಾಳಿ ಸಹಿತ ಭಾರೀ ಮಳೆಗೆ 8 ಬಲಿ
Update: 2018-05-09 22:43 IST
ಲಕ್ನೋ, ಮೇ 9: ಇಂದು ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಿಂದ ಉತ್ತರ ಪ್ರದೇಶದಲ್ಲಿ 8 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ಕುಟುಂಬಕ್ಕೆ ಕೂಡಲೇ ಪರಿಹಾರ ವಿಧಿಸುವಂತೆ ಕರ್ನಾಟಕದಲ್ಲಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಇತ್ಮಾದ್ಪುರದಲ್ಲಿ ಮನೆಯ ಮೇಲೆ ಮರವೊಂದು ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಮಥುರಾದಲ್ಲಿ ಮೂವರು ಹಾಗು ಎತವಾದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.