×
Ad

ಬಂಟ್ವಾಳ: ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ; ಓರ್ವನಿಗೆ ಗಾಯ

Update: 2018-05-09 23:22 IST

ಬಂಟ್ವಾಳ, ಮೇ 9: ಕ್ಷುಲ್ಲಕ ಕಾರಣಕ್ಕಾಗಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಂದಾವರ ದೇವಸ್ಥಾನದ ಸಮೀಪ ಬುಧವಾರ ರಾತ್ರಿ ನಡೆದಿದೆ.

ಇಂದು ರಾತ್ರಿ ನಂದಾವರದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯಲ್ಲಿ ಪಕ್ಷದ ಸಭೆ ನಡೆದಿದ್ದು, ಈ ಸಭೆಗೆ ಇಲ್ಲಿನ ಬಿಜೆಪಿಯ ಕಾರ್ಯಕರ್ತರು ತೆರಳಿದ್ದು, ಸಭೆ ಮುಗಿದ ಬಳಿಕ ಇನ್ನೊಂದು ಪಕ್ಷದ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ್ದು, ಇದರಿಂದ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಓರ್ವನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ಠಾಣೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News