×
Ad

ಕಾಬೂಲ್: ಪೊಲೀಸ್ ಠಾಣೆಗಳ ಮೇಲೆ ದಾಳಿ; 5 ಸಾವು

Update: 2018-05-09 23:31 IST

ಕಾಬೂಲ್, ಮೇ 9: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿನ ಎರಡು ಪೊಲೀಸ್ ಠಾಣೆಗಳ ಮೇಲೆ ಆತ್ಮಹತ್ಯಾ ಬಾಂಬರ್‌ಗಳು ಬುಧವಾರ ದಾಳಿ ನಡೆಸಿದ್ದು, ಕನಿಷ್ಠ ಐವರು ಮೃತಪಟ್ಟಿದ್ದಾರೆ ಹಾಗೂ 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಟ್ಟು 8 ಆತ್ಮಹತ್ಯಾ ಬಾಂಬರ್‌ಗಳು ದಾಳಿಗಳನ್ನು ನಡೆಸಿದ್ದಾರೆ ಎಂದು ಆಂತರಿಕ ಸಚಿವ ವಾಯಿಸ್ ಅಹ್ಮದ್ ಬಾರ್ಮಕ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News