ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಭಾವನಾ ರಾಮಣ್ಣ
Update: 2018-05-10 19:28 IST
ಬೆಂಗಳೂರು, ಮೇ 10: ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ನಟಿ ಭಾವನಾ ರಾಮಣ್ಣ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷವು ತನಗೆ ಚಿತ್ರದುರ್ಗದಿಂದ ಟಿಕೆಟ್ ನೀಡಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಭಾವನಾರಿಗೆ ಕಾಂಗ್ರೆಸ್ ಟಿಕೆಟ್ ನೀಡದೇ ಇರುವುದರಿಂದ ನಿರಾಸೆಯಾಗಿತ್ತು ಎನ್ನಲಾಗಿದೆ. 2013 ಹಾಗು 2014ರ ಚುನಾವಣೆಗಳಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದ ಇವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಿಂದ ದೂರವಾಗಿದ್ದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ನಾಯಕಿ ತೇಜಸ್ವಿನಿ ಸಮ್ಮುಖದಲ್ಲಿ ಭಾವನಾ ಬಿಜೆಪಿಗೆ ಸೇರ್ಪಡೆಯಾದರು.