×
Ad

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ಮನವಿ

Update: 2018-05-10 20:08 IST

ಬೆಂಗಳೂರು, ಮೇ 10: ರಾಜ್ಯದಲ್ಲಿ ಮೇ.12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ದಲಿತರು, ಒಕ್ಕಲಿಗರು ಹಾಗೂ ಲಿಂಗಾಯತ-ವೀರಶೈವ ಸಮಯದಾಯಗಳು ಬಿಜೆಪಿಯನ್ನು ಬೆಂಬಲಿಸುವಂತೆ ಸಮುದಾಯಗಳ ಮುಖಂಡರು ಮನವಿ ಮಾಡಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಅತಿಯಾದ ಸ್ವಜನ ಪಕ್ಷಪಾತ, ರಾಜಕೀಯ ಕಾರಣಗಳಿಗಾಗಿ ಸಮಾಜವನ್ನು ಉದ್ದೇಶಪೂರ್ವಕವಾಗಿ ವಿಭಜನೆ ಮಾಡುವ ಹಾಗೂ ಎತ್ತಿಕಟ್ಟುವ ಕೆಲಸ ಕಾಂಗ್ರೆಸ್ ಸರಕಾರ ಮಾಡಿದೆ. ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಎಲ್ಲ ಸಮುದಾಯಗಳ, ಚಿಂತಕರ, ಪ್ರಜ್ಞಾವಂತರ ಅಭಿಪ್ರಾಯಗಳನ್ನು ಪರಿಗಣಿಸಿ ಸಂಪೂರ್ಣ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ, ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಸಮುದಾಯಗಳ ಹಿತದೃಷ್ಟಿಯಿಂದಾಗಿ ಬಿಜೆಪಿ ಮತ ಹಾಕಬೇಕು. ಕಾಂಗ್ರೆಸ್ ಅನ್ನು ಸೋಲಿಸಬೇಕು ಎಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಡಾ.ಎಂ.ಆರ್.ವೆಂಕಟೇಶ್, ವೀರಶೈವ-ಲಿಂಗಾಯತ ಸಮನ್ವಯ ವೇದಿಕೆ ಅಧ್ಯಕ್ಷ ವಾಗೀಶ್ ಕುಮಾರ್, ಸಫಾಯಿ ಕರ್ಮಚಾರಿಗಳ ಮಹಾಸಂಘದ ಅಧ್ಯಕ್ಷ ಎಂ.ಎನ್.ಶ್ರೀರಾಮ್, ದಲಿತ ಮುಖಂಡ ಡಾ.ಶಂಕರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News