ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
Update: 2018-05-10 20:58 IST
ಉಡುಪಿ, ಮೇ 10: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಗುರುವಾರ ಸರಳವಾಗಿ ಆಚರಿಸಲಾ ಯಿತು.
ಚುನಾವಣಾ ನೀತಿಸಂಹಿತೆ ಪ್ರಯುಕ್ತ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದೇವದಾಸ ಪೈ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಇಲಾಖೆಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮ ಉಪಸ್ಥಿತರಿದ್ದರು.